Indian Coast Guard Group C Recruitment 2025 : ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಎನ್ರೋಲ್ಡ್ ಫಾಲೋವರ್ (ಸ್ವೀಪರ್ / ಸಫಾಯಿವಾಲಾ), (ಗ್ರೂಪ್-ಸಿ ನಾನ್ ಗೆಜೆಟೆಡ್)
ಕರ್ತವ್ಯ ಸ್ಥಳ : ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : 04
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಐಟಿಐ ಅರ್ಹತೆ ಹೊಂದಿರಬೇಕು.
ವಯೋಮಾನ : ದಿನಾಂಕ 10 ಫೆಬ್ರುವರಿ 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ : ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳ ಸಡಿಲಿಕೆ ನೀಡಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಪ್ರೊಫೆಷನಲ್ ಸ್ಕಿಲ್ ಟೆಸ್ಟ್, ಫಿಸಿಕಲ್ ಫಿಟ್ನೆಸ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರ : ಕೋಸ್ಟ್ ಗಾರ್ಡ್ ಡಿಸ್ಟ್ರಿಕ್ಟ್ ಹೆಡ್ ಕ್ವಾರ್ಟರ್ ನಂ. 3, ಮಂಗಳೂರು.
ಅರ್ಜಿ ಸಲ್ಲಿಸುವ ವಿಳಾಸ : The President, (EF Recruitment Board), Coast Guard District Headquarters No.3, Post Box No. 19, Panambur, New Mangalore – 575 010
ನಿಗದಿತ ಅರ್ಜಿ ಶುಲ್ಕದ ವಿವರ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 17, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 10, 2025