ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ಇಂಗ್ಲೆಂಡ್ ನೆಲಕ್ಕೆ ಕಾಲಿಟ್ಟ ಟೀಮ್ ಇಂಡಿಯಾ
ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯವನ್ನು ಇಡೀ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದೆ. ಜೂನ್ 18ರಿಂದ ಇಂಗ್ಲೆಂಡ್ ಸೌತಾಂಪ್ಟನ್ ನಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯದ ಮೇಲೆ ಈಗಾಗಲೇ ಲೆಕ್ಕಚಾರಗಳು ಶುರುವಾಗಿವೆ.
ಪ್ರತಿಷ್ಠಿತ ಪಂದ್ಯವನ್ನು ಗೆಲ್ಲಲು ಈಗಾಗಲೇ ಟೀಮ್ ಇಂಡಿಯಾ ತಯಾರಿ ನಡೆಸಿದೆ. ಮೇ 19ರಿಂದ ಕ್ವಾರಂಟೈನ್ ನಲ್ಲಿದ್ದ ವಿರಾಟ್ ಕೊಹ್ಲಿ ಬಳಗ ಈಗಾಗಲೇ ಇಂಗ್ಲೆಂಡ್ ನೆಲಕ್ಕೆ ಕಾಲಿಟ್ಟಿದೆ.
ಇಂಗ್ಲೆಂಡ್ ನಲ್ಲಿ ಕೋವಿಡ್ ಕ್ವಾರಂಟೈನ್ ಮಗಿಸಿದ ನಂತರ ನಾಲ್ಕು ಹಂತದಲ್ಲಿ ಅಭ್ಯಾಸವನ್ನು ನಡೆಸಲಿದೆ.
ಟೀಮ್ ಇಂಡಿಯಾ ಇಂಗ್ಲೆಂಡ್ ನೆಲಕ್ಕೆ ಕಾಲಿಟ್ಟಿರುವ ಚಿತ್ರವನ್ನು ಟೀಮ್ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ತನ್ನ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಆಟಗಾರರು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಇಂಗ್ಲೆಂಡ್ ಗೆ ತೆರಳಿದ್ದಾರೆ.
ಜೊತೆಗೆ ಭಾರತ ಮಹಿಳಾ ತಂಡದ ಆಟಗಾರ್ತಿಯರು ಕೂಡ ಇಂಗ್ಲೆಂಡ್ ನೆಲಕ್ಕೆ ಕಾಲಿಟಿದ್ದಾರೆ. ಭಾರತ ಮಹಿಳಾ ತಂಡ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಜೂನ್ 16ರಿಂದ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಬಳಿಕ ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ.
ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಟೆಸ್ಟ್ ಪಂದ್ಯದ ಬಗ್ಗೆ ಕ್ರಿಕೆಟ್ ಪಂಡಿತರು ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಬಹುತೇಕರು ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ. ಹಾಗಂತ ನ್ಯೂಜಿಲೆಂಡ್ ತಂಡವನ್ನು ಲಘುವಾಗಿ ಪರಿಗಣಿಸುವ ಹಾಗಿಲ್ಲ. ಯಾಕಂದ್ರೆ ನ್ಯೂಜಿಲೆಂಡ್ ತಂಡ ಫೈನಲ್ ಪಂದ್ಯ ಗೆಲ್ಲುವ ಡಾರ್ಕ್ ಹಾರ್ಸ್ ಅಂತ ಬಿಂಬಿಸಲಾಗುತ್ತಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಫೈನಲ್ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ನಿರ್ಮಿಸಲಿ ಎಂಬುದೇ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಸೆಯಾಗಿದೆ. ಆಲ್ ದಿ ಬೆಸ್ಟ್ ಟೀಮ್ ಇಂಡಿಯಾ..!