ಚಂದ್ರಯಾನ-3 ಉಡಾವಣೆ ಕ್ಷಣಗಣನೆ ಹಿಂದಿನ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಅವರ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.
ವಲರ್ಮತಿ ಅವರು ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡಿದ್ದರು. ಇವರು ಕೊನೆಯ ಕ್ಷಣದವರೆಗೂ ದೇಶದ ಮೂರನೇ ಚಂದ್ರಯಾನ-3ರ ಉಡಾವಣೆಯಲ್ಲಿ ಹಿನ್ನೆಲೆ ಧ್ವನಿ ನೀಡಿದ್ದರು. ತಮಿಳುನಾಡಿನ ಅರಿಯಾಲೂರ್ನವರಾದ ಇವರು, ಶನಿವಾರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇಸ್ರೊ ಮಾಜಿ ನಿರ್ದೇಶಕ ಪಿ.ವಿ ವೆಂಕಟಕೃಷ್ಣನ್ ಅವರು, ಶ್ರೀಹರಿಕೋಟಾದಿಂದ ಇಸ್ರೊ ಭವಿಷ್ಯದ ಮಿಷನ್ಗಳ ಕ್ಷಣಗಣನೆಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3ರ ಅಂತಿಮ ಕ್ಷಣಗಣನೆ ಅವರ ಕೊನೆಯ ಘೋಷಣೆಯಾಗಿತ್ತು. ಅನಿರೀಕ್ಷಿತ ನಿಧನ. ತುಂಬಾ ದುಃಖವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಸ್ಮರಣಾರ್ಥವಾಗಿ ತಮಿಳುನಾಡು ಸರ್ಕಾರ ನೀಡುವ ಪ್ರತಿಷ್ಠಿತ ಅಬ್ದುಲ್ ಕಲಾಂ ಪ್ರಶಸ್ತಿಗೆ ವಲರ್ಮತಿ ಭಾಜನರಾಗಿದ್ದರು.