ರಷ್ಯಾ ದಾಳಿಗೆ ನವೀನ್ ಬಲಿಯಾಗಿರುವುದು ದುರದೃಷ್ಟಕರ
ಬೆಂಗಳೂರು : ಯುಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುಟುಂಬಕ್ಕೆ ಆಧಾರವಾಗಿ ಬಾಳಿ ತಮ್ಮನ್ನು ಸಲಹಬೇಕಾಗಿದ್ದ ಮಗನ ಸಾವಿನಿಂದ ನೊಂದ ಕುಟುಂಬಕ್ಕೆ ನನ್ನ ಸಂತಾಪಗಳು.ಅವರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಯುಕ್ರೇನ್‌ನಲ್ಲಿ ಕರ್ನಾಟಕದ
ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ದದಾಹಿ
ರಷ್ಯಾ ಸೇನೆ
ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ @PMOIndia ಮತ್ತು @BJP4India ಸರ್ಕಾರವೂ ಅಷ್ಟೇ ಹೊಣೆ.
2/3#UkraineRussiaWar— Siddaramaiah (@siddaramaiah) March 1, 2022
ಯುಕ್ರೇನ್‌ನಲ್ಲಿ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರವೂ ಅಷ್ಟೇ ಹೊಣೆ.
ಯುಕ್ರೇನ್ ಯುದ್ದಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿರುವುದು ದುರದೃಷ್ಟಕರ. ಪ್ರಧಾನಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಬಳಸಿಕೊಂಡು ಯುದ್ದದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ.
Indian killed in Ukraine’s Kharkiv is Naveen