ಉತ್ತರ ಕನ್ನಡ : ಇಡಿ ದೇಶವೇ ಲಾಕ್ ಡೌನ್ ಆದರೂ ಕೆಲ ಕಡೆ ಅನಗತ್ಯವಾಗಿ ಜನ ಓಡಾಡುತ್ತಿದ್ದಾರೆ. ಹಾಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಒಂದು ಹೆಜ್ಜೆ ಮುಂದೆ ಹೋಗಿ, ಅನಗತ್ಯವಾಗಿ ಮನೆಯಿಂದ ಹೊರ ಬಂದು ಬೈಕ್ ನಲ್ಲಿ ಸುತ್ತಾಡಿದರೇ ಅವರ ಲೈಸೆನ್ಸ್ ರದ್ದು ಮಾಡಲು ಸೂಚನೆ ನೀಡಿದ್ದಾರೆ.
ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆಗಿದೆ. ಇದರ ಗಂಭೀರತೆ ಕೆಲ ಜನರಿಗೆ ಬಂದಂತಿಲ್ಲ. ಹಾಗಾಗಿ ನಿಯಮ ಉಲ್ಲಂಘನೆ ಮಾಡಿ ಹೊರಗೆ ಓಡಾಡುತ್ತಿದ್ದಾರೆ. ಇದ್ದರಿಂದ ಅನಗತ್ಯವಾಗಿ ವಾಹನಗಳು ರಸ್ತೆಗೆ ಬಂದ್ರೆ ಅವರ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ ಹೇಳಿದ್ದಾರೆ.








