ಟಿ20 ವಿಶ್ವಕಪ್ ನಲ್ಲಿ (T20 World Cup 2024) ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ಮಧ್ಯೆ ಪಂದ್ಯ ನಡೆಯುತ್ತಿದ್ದು, ಇಂದು ರೋಹಿತ್ (Rohit Sharma) ಪಡೆ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದೆ.
ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೀಗಾಗಿ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಎಲ್ಲ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಡೇವಿಡ್ 1996 ರಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ್ದರು. ಭಾರತದ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ದೇಶೀ ಕ್ರಿಕೆಟ್ ನಲ್ಲಿ ಕರ್ನಾಟಕ ಪರ ಅವರು 39 ಪ್ರಥಮ ದರ್ಜೆ ಪಂದ್ಯಗಳು ಮತ್ತು 33 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.