ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಜಮ್ಮು&ಕಾಶ್ಮೀರ : ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಾಲ್ವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕಾಶ್ಮೀರದ ಶೋಪಿಯಾನ್ ನ ಝೈನ್ ಪೋರಾ ಪ್ರದೇಶದ ಬಡಿಗಾಮ್ ಹಳ್ಳಿಯಲ್ಲಿ ಉಗ್ರರು ಅವಿತಿದ್ದರು. ಈ ಮಾಹಿತಿಯನ್ನು ಪಡೆದ ಯೋಧರು ಕಾರ್ಯಾಚರಣೆಗೆ ಇಳಿದಿದ್ದು, ಉಗ್ರರ ಅಡಗುತಾಣವನ್ನು ಸುತ್ತುವರೆದರು. ಈ ವೇಳೆ ಉಗ್ರರು ಯೋಧರತ್ತ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಪ್ರತಿದಾಳಿ ನಡೆಸಿದ ಯೋಧರು ನಾಲ್ವರು ಉಗ್ರರನ್ನು ಕೊಂದು ಹಾಕಿದರು ಎಂದು ಕಾಶ್ಮೀರದ ಐಜಿಪಿ ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.
ಹತ್ಯೆಯಾದ ಉಗ್ರರನ್ನು ಅಖೀಬ್ ಫಾರೂಕ್ ಥೋಕರ್, ವಸೀಮ್ ಅಹ್ಮದ್ ಥೋಕರ್, ಫಾರೂಕ್ ಅಹ್ಮದ್ ಭಟ್ ಮತ್ತು ಶೋಕಿನ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ.
ಕಾರ್ಯಾಚರಣೆಗೆ ತರಳುತ್ತಿದ್ದ ಸೇನಾ ವಾಹನ ಅಪಘಾತಕ್ಕೀಡಾಗಿ ಮೂವರು ಯೋಧರು ಮೃತಪಟ್ಟಿದ್ದಾರೆ. ಮಳೆಯಿಂದ ಒದ್ದೆಯಾಗಿದ್ದ ರಸ್ತೆಯಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಉರುಳಿದೆ.
ಪರಿಣಾಮ 8 ಜನ ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಇಬ್ಬರು ಯೋಧರು ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.








