ರೋಮ್: ಇಟಲಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಸರ್ಕಾರದ ನೆರವು ಬಯಸಿದ್ದಾರೆ. ರಾಮ್ ರಾವತ್ ಈ ರೀತಿ ಶವವಾಗಿ ಪತ್ತೆಯಾಗಿರುವ ವಿದ್ಯಾರ್ಥಿ. ಈ ವಿದ್ಯಾರ್ಥಿ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ನಿವಾಸಿಯಾಗಿದ್ದು, ಎಂಬಿಎ ಓದುವವುದಕ್ಕಾಗಿ ಇಟಲಿಗೆ ತೆರಳಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಪೋಷಕರು ಆತನಿಗೆ ಕರೆ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಆತ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಂಶಯಗೊಂಡು ವಸತಿ ಗೃಹದ ಮಾಲೀಕರನ್ನು ಸಂಪರ್ಕಿಸಿದ್ದಾರೆ. ಆಗ ವಾಶ್ ರೂಂನಲ್ಲಿ ಶವವಾಗಿ ಪತ್ತೆಯಾಗಿರುವುದು ಗೊತ್ತಾಗಿದೆ. ಇದರಿಂದಾಗಿ ಕುಟುಂಬಸ್ಥರ ಗೋಳಾಡುತ್ತಿದ್ದು, ಮೃತದೇಹವನ್ನು ದೇಶಕ್ಕೆ ತರಲು ಮನವಿ ಮಾಡಿದ್ದಾರೆ.








