ಡಂಬುಲ್ಲಾ: ಮಹಿಳಾ ಟಿ20 ಏಷ್ಯಾಕಪ್ (Women’s Asia Cup 2024) ಟೂರ್ನಿಯಲ್ಲಿ ಭಾರತೀಯ ಮಹಿಳಾ ತಂಡ ಆತಿಥೇಯ ಶ್ರೀಲಂಕಾ ತಂಡ (SriLanka Womens Team) ದ ವಿರುದ್ಧ ಸೋಲು ಕಂಡಿದೆ.
ಈ ಮೂಲಕ ಶ್ರೀಲಂಕಾ ಮೊದಲ ಬಾರಿಗೆ ಏಷ್ಯಾ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಫೈನಲ್ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಏಷ್ಯಾಕಪ್ ಚಾಂಪಿಯನ್ (Asian champions) ಆಗಿ ಹೊರಹೊಮ್ಮಿದ್ದು, 20 ವರ್ಷಗಳ ಕನಸನ್ನು ನನಸು ಮಾಡಿಕೊಂಡಿದೆ. ಭಾರತ 2ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ಪಡೆಯುವಂತಾಯಿತು.
ಬ್ಯಾಟಿಂಗ್ ಆಯ್ದುಕೊಂಡ ಭಾರತದ ಮಹಿಳಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಬಾರಿಸಿತ್ತು. ಈ ಗುರಿ ಬೆನ್ನಟ್ಟಿದ ಲಂಕಾ 18.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ ಲಂಕಾ ಮೊಟ್ಟ ಮೊದಲ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು.
2012, 2016, 2018, 2022ರಲ್ಲಿ ಫೈನಲ್ ತಲುಪಿದ್ದ ಭಾರತ ಮೂರು ಬಾರಿ ಚಾಂಪಿಯನ್ ಆಗಿತ್ತು. 2022ರಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಶ್ರೀಲಂಕಾ ಭಾರತದ ವಿರುದ್ಧ 8 ವಿಕೆಟ್‌ಗಳ ಅಂತರದಿಂದ ಸೋತು ಚಾಂಪಿಯನ್ ಪಟ್ಟ ಕಳೆದುಕೊಂಡಿತ್ತು. ಈಗ ಭಾರತದ ವಿರುದ್ಧವೇ ಗೆದ್ದು ಸೇಡು ತೀರಿಸಿಕೊಂಡಿದೆ.








