ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವದಾಖಲೆ ಬರೆದ ಭಾರತೀಯ ಯುವ ಪಡೆ

234 ರನ್ ಗಳಿಸಿದ ಭಾರತ

Author2 by Author2
July 7, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತ ಹಾಗೂ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತೀಯ ತಂಡ ದಾಖಲೆಯ ಮೊತ್ತ ಕಲೆ ಹಾಕಿ ಐತಿಹಾಸಿಕ ಸಾಧನೆ ಮಾಡಿದೆ.

ಭಾರತ ತಂಡವು ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಬರೋಬ್ಬರಿ 234 ರನ್ ಗಳಿಸಿದೆ. ಆದರೆ, ಇದೇ ಮೈದಾನದಲ್ಲಿ ನಿನ್ನೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೇವಲ 115 ರನ್ ಗಳಿಸಲಾಗದೆ ಭಾರತ ತಂಡ 102 ರನ್ಗಳಿಗೆ ಆಲೌಟ್ ಆಗಿ ಸೋಲು ಕಂಡಿತ್ತು. ಆದರೆ, ಭಾನುವಾರ ಮಾತ್ರ ಸೇಡು ತೀರಿಸಿಕೊಳ್ಳುವುದರ ಮೂಲಕ ವಿಶ್ವ ದಾಖಲೆಯನ್ನೂ ಬರೆದಿದೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಹರಾರೆ ಮೈದಾನದಲ್ಲಿ ಟೀಂ ಇಂಡಿಯಾ, 234 ಕಲೆಹಾಕುವ ಮೂಲಕ ಈ ಮೈದಾನದಲ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ ದಾಖಲೆ ಬರೆದಿದೆ. ಇದಕ್ಕೂ ಮುನ್ನ 229 ರನ್ ಬಾರಿಸಿದ್ದ ಆಸ್ಟ್ರೇಲಿಯಾದ ಹೆಸರಿನಲ್ಲಿ ಈ ದಾಖಲೆ ಇತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಶುಭ್‌ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿದರು.

ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ ಕೇವಲ 10 ರನ್ ಗಳಿಸುವಷ್ಟರಲ್ಲಿ ಶುಭ್‌ಮನ್ ಗಿಲ್ ಔಟ್ ಆದರು. ನಂತರ ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದ ಇನ್ನಿಂಗ್ಸ್ ನಿಭಾಯಿಸಿ ತಮ್ಮ ಎರಡನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದ ದಾಖಲೆ ಬರೆದರು. ತಮ್ಮ ವೃತ್ತಿಜೀವನದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕೇವಲ 46 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳ ಸಹಾಯದಿಂದ 100 ರನ್ ಗಳಿಸಿದ ಸಾಧನೆ ಮಾಡಿದರು.

ಆದರೆ ಆ ನಂತರದ ಎಸೆತದಲ್ಲಿ ಅಭಿಷೇಕ್ ಔಟಾದರು. ಈ ಸಂದರ್ಭದಲ್ಲಿ ಅಭಿಷೇಕ್ ಎರಡನೇ ವಿಕೆಟ್‌ ಗೆ ಗಾಯಕ್ವಾಡ್ ಜೊತೆ 137 ರನ್‌ ಗಳ ಜೊತೆಯಾಟ ನೀಡಿದ್ದರು. ಆ ನಂತರ ಜೊತೆಯಾದ ಗಾಯಕ್ವಾಡ್ ಹಾಗೂ ರಿಂಕು ಸಿಂಗ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ರುತುರಾಜ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ ತಮ್ಮ ಇನ್ನಿಂಗ್ಸ್ನಲ್ಲಿ 47 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 77 ರನ್ ಗಳಿಸಿ ಅಜೇಯರಾಗಿ ಉಳಿದರು. ರಿಂಕು ಸಿಂಗ್ ಕೂಡ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 48 ರನ್ ಗಳ ಅಜೇಯ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಭಾರತ ತಂಡ ಹೊಸ ಮೈಲಿಗಲ್ಲು ಸಾಧಿಸಿತು.

Tags: Indian youth force set a world record
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram