ಕೊರೋನಾ ಸೋಂಕು ಮಹಾಮಾರಿಗೆ ಅಮೆರಿಕ ತಲ್ಲಣಗೊಂಡಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಮತ್ತು 4 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ 11 ಮಂದಿ ಭಾರತೀಯರು ಮೃತಪಟ್ಟಿದ್ದು, ಸುಮಾರು 16ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮೃತಪಟ್ಟವರು ಪುರುಷರಾಗಿದ್ದು ಇವರಲ್ಲಿ ಎಂಟು ಮಂದಿ ನ್ಯೂಯಾರ್ಕ್, ಮೂರು ಮಂದಿ ನ್ಯೂಜೆರ್ಸಿ, ಉಳಿದವರು ಟೆಕ್ಸಾಸ್ ಮತ್ತು ಕ್ಯಾಲಿಫೋರ್ನಿಯಾದವರು. ಇವರೆಲ್ಲಾ ಭಾರತದ ಉತ್ತರಾಖಂಡ, ಮಹಾರಾಷ್ಟ್ರ, ಕರ್ನಾಟಕ ಮತ್ತು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಭಾರತೀಯ ರಾಯಭಾರ ಕಚೇರಿ ಮತ್ತು ಸ್ಥಳೀಯ ಅಧಿಕಾರಿಗಳು ಅಮೆರಿಕಾದಲ್ಲಿ ಕೊರೊನಾ ಸೋಂಕು ತಗುಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲದೆ, ಭಾರತ-ಅಮೆರಿಕ ಸಂಘಸಂಸ್ಥೆಗಳು ನಿಕಟ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿವೆ ಎಂದು ವರದಿ ತಿಳಿಸಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು, ಮೃತರ ಶವಸಂಸ್ಕಾರಕ್ಕೂ ಸಂಬಂಧಿಕರು ಪಾಲ್ಗೊಳ್ಳುವುದನ್ನು ನಿರ್ಬಂಧಿಸಲಾಗಿದೆ. ಶವಸಂಸ್ಕಾರವನ್ನು ಸ್ಥಳೀಯ ಅಧಿಕಾರಿಗಳೇ ನೆರವೇರಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








