ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಆರ್ಚರಿ ಮಹಿಳಾ ತಂಡವು ಚೈನೀಸ್ ತೈಪೆ ತಂಡವನ್ನು ಫೈನಲ್ ನಲ್ಲಿ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ.
ಹಾಲಿ ವಿಶ್ವ ಚಾಂಪಿಯನ್ ಆಗಿರುವ ಜ್ಯೋತಿ ಸುರೇಖಾ ವೆನ್ನಮ್, ಅದಿತಿ ಸ್ವಾಮಿ, ಪರ್ನೀತ್ ಕೌರ್ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ, ಚಿನ್ನಕ್ಕೆ ಮುತ್ತಿಕ್ಕಿದ್ದಾರೆ. ಇಲ್ಲಿ ನಡೆದ ಐದನೇ ಪದಕ ಖಚಿತಪಡಿಸಿಕೊಳ್ಳುವುದಕ್ಕಾಗಿ ಭಾರತ ತಂಡವು ಸೆಮಿಫೈನಲ್ ನಲ್ಲಿ ಇಂಡೋನೇಷ್ಯಾ ತಂಡವನ್ನು ಸೋಲಿಸಿತ್ತು.
ನಿನ್ನೆ ನಡೆದಜಾವೆಲಿನ್ (Javelin) ಎಸೆತದಲ್ಲಿ ಭಾರತದ್ದೇ ಪಾರುಪತ್ಯವಾಗಿದೆ. ಚಿನ್ನ ಹಾಗೂ ಬೆಳ್ಳಿ ಎರಡೂ ಬಾರತದ ಪಾಲಾಗಿವೆ. ಭಾರತದ ನೀರಜ್ ಚೋಪ್ರಾ (Neeraj Chopra) ಚಿನ್ನ ಹಾಗೂ ಕಿಶಮತ್ತು ಕಿಶೋರ್ ಜೇನಾ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಉನ್ನತ ಸಾಧನೆ ಮಾಡಿದ್ದಾರೆ.
ನೀರಜ್ 88.88 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಕ್ಕಿದರು. ಇನ್ನೊಂದೆಡೆ ನೀರಜ್‍ಗೆ ತಕ್ಕ ಪೈಪೋಟಿ ಭಾರತೀಯರೇ ಆದ ನೀಡಿದ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದರು. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ಗೆದ್ದಿದ್ದ ನೀರಜ್, 2018ರ ಏಷ್ಯನ್ ಕ್ರೀಡಾಕೂಟದಲ್ಲೂ ಚಿನ್ನದ ಪದಕ ಗೆದ್ದಿದ್ದರು. ಈಗ ಎರಡನೇ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದಾರೆ. ಸದ್ಯ ಭಾರತ 82 ಪದಕಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡು ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದೆ. ಇದರಲ್ಲಿ 19 ಚಿನ್ನದ ಪದಕ, 31 ಬೆಳ್ಳಿ, 32 ಕಂಚಿನ ಪದಕಗಳು ಸೇರಿವೆ.