ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ಭೀಕರತೆ ಪಡೆದಿದ್ದು, ಭಾರತೀಯರು ಮರಳಿ ತಾಯ್ನಾಡಿನತ್ತ ಮುಖ ಮಾಡಿದ್ದಾರೆ.
ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಆರಂಭಿಸಲಾಗಿತ್ತು. ಭಾರತೀಯರನ್ನು (Indians) ಹೊತ್ತ ಮೊದಲ ವಿಮಾನ ಇಸ್ರೇಲ್ನಿಂದ ದಹೆಲಿಗೆ ಬಂದಿದೆ.
230 ಭಾರತೀಯರು ತವರಿಗೆ ಮರಳಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸ್ವಾಗತಿಸಿದ್ದಾರೆ. 230 ಜನರಲ್ಲಿ ಐವರು ಕನ್ನಡಿಗರು ಇದ್ದಾರೆ. ಅವರನ್ನು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಕುರಿತು ಸಿಎಂ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಜೊತೆಗೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಂತ ಹಂತವಾಗಿ ಕನ್ನಡಿಗರು ಮರಳಿ ಬರಲಿದ್ದಾರೆ. ರಾಜ್ಯ ಸರ್ಕಾರ ಜೊತೆಗಿದೆ ಎಂಬ ಸಂದೇಶ ತಿಳಿಸುವುದಕ್ಕಾಗಿ ನಾನೇ ಸ್ವಾಗತಿಸಲು ಬಂದಿದ್ದೇನೆ ಎಂದು ಹೇಳಿದ್ದಾರೆ.