ಕೊರೊನಾ ವಿರುದ್ಧ ಗೆಲ್ಲುತ್ತಿದೆ ಭಾರತ : ಗುಣಮುಖರ ಪ್ರಮಾಣ ಶೇ. 90.80ಕ್ಕೆ ಏರಿಕೆ covid
ನವದೆಹಲಿ : ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಹಾವಳಿ ಕಡಿಮೆಯಾದಂತೆ ಕಾಣುತ್ತಿದೆ. ಅನೇಕ ಸಮಸ್ಯೆಗಳ ಮಧ್ಯೆ ಸೋಂಕು ಕಡಿಮೆ ಆಗುತ್ತಿರುವ ಲಕ್ಷಣಗಳು ಕಾಣುತ್ತಿದೆ.
ಕಳೆದ ತಿಂಗಳಿಗೆ ಹೋಲಿಕೆ ಮಾಡಿಕೊಂಡರೇ ಸದ್ಯ ದೇಶದಲ್ಲಿ ಒಂದು ದಿನದಲ್ಲಿ ಪತ್ತೆಯಾಗುತ್ತಿದ್ದ ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.73 ಲಕ್ಷ ಕೇಸ್ ಗಳು ವರದಿಯಾಗಿದ್ದು, 2,84,601 ಮಂದಿ ಗುಣಮುಖರಾಗಿದ್ದಾರೆ.
ಇದರೊಂದಿಗೆ ಈವರೆಗೂ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 2,51,78,011ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 22,28,724 ಕೇಸ್ ಗಳು ಆಕ್ಟಿವ್ ಆಗಿವೆ.
ಇನ್ನು ಕಳೆದ 24 ಗಂಟೆಗಳಲ್ಲಿ 3,617 ಮಂದಿ ಸೋಂಕಿಗೆ ಬಲಿಯಾಗಿದ್ದು, 1,73,921 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಮೃತರ ಸಂಖ್ಯೆ 3,22,512ಕ್ಕೆ ಹಾಗೂ ಸೋಂಕಿತರ ಸಂಖ್ಯೆ 2,77,29,247ಕ್ಕೆ ಹೆಚ್ಚಳವಾಗಿದೆ.










