ಉಕ್ರೇನ್ ವಿಚಾರದಲ್ಲಿ ಭಾರತದ ವಿದೇಶಾಂಗ ನೀತಿ ವಿಫಲವಾಗಿದೆ: ಡಿ. ಕೆ. ಸುರೇಶ್ – Saaksha Tv
ಬೆಂಗಳೂರು: ಉಕ್ರೇನ್ ವಿಚಾರದಲ್ಲಿ ಭಾರತದ ವಿದೇಶಾಂಗ ನೀತಿ ವಿಫಲವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಪಂಚವೇ ಉಕ್ರೇನ್ ಕಡೆ ತಿರುಗಿ ನೋಡುತ್ತಿದೆ. ಪ್ರಧಾನಿಗಳು ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಇದು ಶೋಚನೀಯ ಸ್ಥಿತಿ. ಭಾರತೀಯರಿಗೆ ರಕ್ಷಣೆ ನೀಡೋದರಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.
ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೇಂದ್ರ ಸರಕಾರ ತೆಗೆದುಕೊಂಡಿಲ್ಲ. ಉಕ್ರೇನ್ ನಲ್ಲಿ ವಿದ್ಯಾರ್ಥಿಗಳು ಇವತ್ತು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ತುರ್ತು ಕೆಲಸ ಮಾಡುತ್ತಿದ್ದಾರೆ. ಪ್ರಧಾನಿಗಳು ಕೂಡಲೇ ಭಾರತೀಯರ ರಕ್ಷಣೆಗೆ ಬೇಕಾದ ವ್ಯವಸ್ಥೆ ಮಾಡಬೇಕು ಎಂದರು.
ಅಲ್ಲದೇ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಕಾಪಾಡುವ ಒತ್ತಡವನ್ನು ಭಾರತ ಸರಕಾರ ಹಾಕಬೇಕು ಎಂದು ತಿಳಿಸಿದರು.
ಇದೇ ವೇಳೆ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ ಮಾತನಾಡಿ, ವಿದೇಶಾಂಗ ನೀತಿಯಲ್ಲಿ ಮೋದಿ ಸರಕಾರ ವಿಫಲವಾಗಿದೆ. ನೆಹರು ನೀತಿ ಇವತ್ತು ಎಲ್ಲರು ಮಾತಾಡಿದ್ದಾರೆ. ನೆಹರು ವಿರುದ್ಧ ಮಾತಾಡೊ ಮೋದಿ, ಸಂಘದವರ ಬಗ್ಗೆ ಈಗ ಅರ್ಥ ಆಗುತ್ತಿದೆ ಎಂದು ಹೇಳಿದರು.
ಅಲಿಪ್ತ ನೀತಿ ಬಗ್ಗೆ ಮಾತಾಡಬೇಕಿತ್ತು. ಯುದ್ಧಕ್ಕೂ ಮುನ್ನ ಕೇಂದ್ರ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಲಬೇಕಿತ್ತು. ಆದರೆ ಮೋದಿ ಸರಕಾರ ಯಾವುದೇ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಲಾಕ್ ಡೌನ್ ಘೋಷಣೆ ಮಾಡಿದ ಹಾಗೆ ಇದನ್ನು ಮಾಡಿದೆ ಎಂದು ಟೀಕಿಸಿದ್ದಾರೆ.








