ಹಣಕಾಸು ವರ್ಷದ ಮೊದಲ ಕ್ವಾರ್ಟರ್ನಲ್ಲಿ ದೇಶದ ಜಿಡಿಪಿ ಬೆಳವಣಿಗೆ ಆರ್ಬಿಐ ನಿರೀಕ್ಷಿಸಿದ್ದಕ್ಕಿಂತ ತುಸು ಕಡಿಮೆಯಾಗಿದ್ದರೂ ಉಳಿದ ದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾಗಿದೆ.
2023ರ ಏಪ್ರಿಲ್ನಿಂದ ಜೂನ್ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇ. 7.8ರಷ್ಟು ಹೆಚ್ಚಿದೆ. ಹಿಂದಿನ ವರ್ಷದ ಅವಧಿಗೆ ಹೋಲಿಕೆ ಮಾಡಿದರೆ, ಈ ಬಾರಿ ಹೆಚ್ಚಾಗಿದೆ. 2023ರ ಜನವರಿಯಿಂದ ಮಾರ್ಚ್ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 6.1ರಷ್ಟು ಹೆಚ್ಚಳವಾಗಿತ್ತು.
ಭಾರತೀಯ ರಿಸರ್ವ್ ಬ್ಯಾಂಕ್ ಮೊದಲ ಕ್ವಾರ್ಟರ್ನಲ್ಲಿ ಶೇ. 8ರಷ್ಟು ಜಿಡಿಪಿ ಹೆಚ್ಚಬಹುದು ಎಂದು ನಿರೀಕ್ಷಿಸಿತ್ತು.