ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರಿಗೆ 10% ರಿಯಾಯಿತಿ ಘೋಷಿಸಿದ ಇಂಡಿಗೋ
ನವದೆಹಲಿ : ಕೋವಿಡ್ ಆತಂಕದ ನಡುವೆ ಲಸಿಕೆ ಅಭಿಯಾನಕ್ಕೆ ಹೆಚ್ಚು ಆದ್ಯತೆ ನೀಡಲಾಗ್ತಿದೆ. ಈ ನಡುವೆ ಇಂಡಿಗೋ ವಿಮಾನ ಸಂಸ್ಥೆ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರಿಗೆ ಶೇ.10 ರಷ್ಟು ರಿಯಾಯಿತಿ ನೀಡುವುದಾಗಿ ಘೋಷಿಸಿದೆ. ಹೌದು ಮೂಲ ಬೆಲೆಯ ಆಧಾರದಲ್ಲಿ ರಿಯಾಯಿತಿ ಘೋಷಣೆ ಮಾಡಿದೆ.. ಆದ್ರೆ ಲಸಿಕೆ ಪಡೆದವರು ಮಾತ್ರವೇ ಈ ರಿಯಾಯಿತಿಗೆ ಅರ್ಹರಾಗಿರುತ್ತಾರೆ.
ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ತಳಿ ಹಾವಳಿ – 40 ಪ್ರಕರಣ ದೃಢ
ಭಾರತದಲ್ಲಿನ 18 ವರ್ಷದ ಮೇಲ್ಪಟ್ಟ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರಿಗೆ ಈ ಆಫರ್ ಅನ್ವಯವಾಗಲಿದ್ದು, ಭಾರತದಿಂದ ಬುಕ್ ಮಾಡುವವರು ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ. ಬುಕ್ಕಿಂಗ್ ವೇಳೆ ಈ ಸೌಲಭ್ಯವನ್ನು ಪಡೆಯುವ ಪ್ರಯಾಣಿಕರು ಏರ್ ಪೋರ್ಟ್ ಚೆಕ್-ಇನ್ ವೇಳೆ ಕೋವಿಡ್-19 ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಯಮಗಳ ಪಾಲನೆ ವಿಚಾರವಾಗಿ ಗೂಗಲ್ ಕಾರ್ಯವೈಖರಿಯ ತನಿಖೆಗೆ ಮುಂದಾದ ಐರೋಪ್ಯ ಒಕ್ಕೂಟ..!
ಇಲ್ಲದೇ ಇದ್ದಲ್ಲಿ ಆರೋಗ್ಯ ಸೇತು ಆಪ್ ನಲ್ಲಿ ತಮ್ಮ ಲಸಿಕೆ ಸ್ಥಿತಿ ಏನಿದೆ ಎಂಬುದನ್ನು ತೋರಿಸಬಹುದಾಗಿದೆ. ಇಂಡಿಗೋದ ಮುಖ್ಯ ಕಾರ್ಯತಂತ್ರ ಹಾಗೂ ಆದಾಯ ವಿಭಾಗದ ಅಧಿಕಾರಿ ಸಂಜಯ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾಗಿ ರಾಷ್ಟ್ರೀಯ ಲಸಿಕೆ ಅಭಿಯಾನಕ್ಕೆ ಕೊಡುಗೆ ನೀಡಬೇಕೆಂದೆನಿಸಿದ ಕಾರಣಕ್ಕೆ ಲಸಿಕೆ ಪಡೆಯುವುದನ್ನು ಉತ್ತೇಜಿಸುವುದಕ್ಕಾಗಿ ಈ ರಿಯಾಯಿತಿ ಆಫರ್ ನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.