IndiGo – ಕರಾಚಿಯಯಲ್ಲಿ ತುರ್ತು ಭೂ ಸ್ಪರ್ಷ ಮಾಡಿದ ಇಂಡಿಗೋ ವಿಮಾನ
ಯುಎಇಯ ಶಾರ್ಜಾದಿಂದ ಹೈದರಾಬಾದ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷದ ಕಂಡು ಬಂದ ಹಿನ್ನಲೆ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಇಂಡಿಗೋ ಏರ್‌ಲೈನ್ಸ್, ಪೈಲಟ್ ವಿಮಾನದಲ್ಲಿ ತಾಂತ್ರಿಕ ದೋಷವನ್ನು ಗಮನಿಸಿದ ನಂತರ, ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಪಾಕಿಸ್ತಾನದ ಕರಾಚಿ ಕಡೆಗೆ ತಿರುಗಿಸಿದ್ದಾರೆ. ಪ್ರಯಾಣಿಕರನ್ನು ಹೈದರಾಬಾದ್‌ಗೆ ಕರೆದೊಯ್ಯಲು ಹೆಚ್ಚುವರಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಎರಡು ವಾರಗಳಲ್ಲಿ ಇದು ಎರಡನೇ ಭಾರಿ ಕರಾಚಿ ವಿಮಾನ ತುರ್ತು ಭೂ ಸ್ಪರ್ಷ ಮಾಡಿರುವುದು. ಈ ಹಿಂದೆ ಸ್ಪೈಸ್‌ಜೆಟ್ ವಿಮಾನ ಕರಾಚಿಯಲ್ಲಿಯೇ ತುರ್ತು ಭೂಸ್ಪರ್ಶ ಮಾಡಿತ್ತು.
ಜುಲೈ 5 ರಂದು ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್‌ನ SG-11 ವಿಮಾನವು ತಾಂತ್ರಿಕ ದೋಷದ ನಂತರ ಸ್ವತಃ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಘಟನೆಯ ಬಗ್ಗೆ ಮಾಹಿತಿ ನೀಡಿದ ಸ್ಪೈಸ್‌ಜೆಟ್ ವಕ್ತಾರರು ಸ್ಪೈಸ್‌ಜೆಟ್ ಬಿ737 ವಿಮಾನವನ್ನು ಕರಾಚಿಯ ಕಡೆಗೆ ತಿರುಗಿಸಲಾಗಿದ್ದು, ಇಂಡಿಕೇಟರ್ ಲೈಟ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಎಂದು ಹೇಳಿದ್ದಾರೆ. ವಿಮಾನವನ್ನ ಮತ್ತು ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು.
ಇದೇ ವೇಳೆಗೆ ಜುಲೈ 14ರ ಸಂಜೆ ದೆಹಲಿಯಿಂದ ವಡೋದರಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಗಮನಾರ್ಹವಾಗಿ, ಕಳೆದ ಕೆಲವು ದಿನಗಳಲ್ಲಿ, ಭಾರತದಲ್ಲಿ ಅನೇಕ ವಿಮಾನಗಳು ತುರ್ತು ಲ್ಯಾಂಡಿಂಗ್ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.