ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ , ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ , ಆಕ್ಸಿಜನ್ ಕೊರತೆಯಿಂದ ರೋಗಿಗಳ ಪರದಾಟ

1 min read

ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ , ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ , ಆಕ್ಸಿಜನ್ ಕೊರತೆಯಿಂದ ರೋಗಿಗಳ ಪರದಾಟ

ಒಂದೆಡೆ ಭಾರತದಲ್ಲಿ ಕೋವಿಡ್ 2ನೇ ಅಲೆ ಕಡಿಮೆಯಾಗ್ತಿದೆ.. ಆದ್ರೆ ಡೆಲ್ಟಾ ಆತಂಕ ಹೆಚ್ಚಾಗ್ತಿದೆ.. ಈ ನಡುವೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದೆ.. ಈ ಪೈಕಿ ಇಂಡೊನೇಷ್ಯಾವೂ ಕೂಡ ಒಂದು..

ಹವದು ಇಂಡೋನೇಷ್ಯಾದಲ್ಲಿ ಕೋವಿಡ್‌ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತೊಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ.  ಇತ್ತ  ಪ್ರಕರಣಗಳು ಹೆಚ್ಚುತ್ತಿದ್ದು, ಆಕ್ಸಿಜನ್ ಕೊರತೆಯೂ ಉಂಟಾಗಿದ್ದು, ಜನ ತ್ತರಿಸಿಹೋಗಿದ್ದಾರೆ. ಆಮ್ಲಜನಕ ಸಿಲಿಂಡರ್‌ ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.

ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್‌ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್‌ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ. ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ರಾಕೇಟ್ ವೇಗದಲ್ಲಿ ವ್ಯಾಪಿಸುತ್ತಿದೆ ಡೆಲ್ಟಾ ಪ್ಲಸ್..!

ಮಹಾರಾಷ್ಟ್ರ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸ್ಫೋಟ – 6 ಮಂದಿಗೆ ಗಾಯ

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 43,071 ಮಂದಿಗೆ ಸೋಂಕು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd