ಬೆಂಗಳೂರು: ಸ್ಯಾಂಡಲ್ವುಡ್ ಡ್ರಂಗ್ ಲಿಂಕ್ ಬಗ್ಗೆ ಬಹಿರಂಗ ಹೇಳಿಕೆ ನೀಡಿ ಸಂಚಲನ ಮೂಡಿಸಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೆಲವೇ ಕ್ಷಣಗಳಲ್ಲಿ ಸಿಸಿಬಿ ಮುಂದೆ ಹಾಜರಾಗಲಿದ್ದಾರೆ.
ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ನಿನ್ನೆ ಸಿಸಿಬಿ ಪೊಲೀಸರು ಇಂದ್ರಜಿತ್ ಲಂಕೇಶ್ಗೆ ನೋಟಿಸ್ ನೀಡಿದ್ದರು. ಭದ್ರತೆ ನೀಡಿದರೆ ಹೇಳಿಕೆ ನೀಡುವುದಾಗಿ ಇಂದ್ರಜಿತ್ ಲಂಕೇಶ್ ಕೂಡ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದ್ರಜಿತ್ ಲಂಕೇಶ್ಗೆ ಸಿಸಿಬಿ ಪೊಲೀಸರು ಅಗತ್ಯ ಭದ್ರತೆ ನೀಡಲಿದ್ದಾರೆ.
11.30ಕ್ಕೆ ಸಿಸಿಬಿ ಕಚೇರಿಗೆ ಹಾಜರಾಗಲಿರುವ ಇಂದ್ರಜಿತ್ ಲಂಕೇಶ್ ಅವರನ್ನು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಡಿಸಿಪಿ ಹಾಗೂ ಎಸಿಪಿಗಳ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.
ಸಿಸಿಬಿ ಪೊಲೀಸರು ಈಗಾಗಲೇ ಇಂದ್ರಜಿತ್ ಲಂಕೇಶ್ ಬಳಿ ಕೇಳುವ ಪ್ರಶ್ನೆಗಳ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ. ಇಂದ್ರಜಿತ್ ಲಂಕೇಶ್ರ ಹೇಳಿಕೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಇತ್ತ ಇಂದ್ರಜಿತ್ ಲಂಕೇಶ್ ವಿಚಾರಣೆ ಸಿಸಿಬಿ ಕಚೇರಿಯಲ್ಲಿ ನಡೆದರೆ, ಅತ್ತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ರಾಜ್ಯಕ್ಕೆ ಕಳಂಕ ತಂದಿರುವ ಡ್ರಗ್ಸ್ ಮಾಫಿಯಾ ಹಾಗೂ ಸ್ಯಾಂಡಲ್ವುಡ್ ನಂಟು ಹಾಗೂ ಈ ಜಾಲ ಭೇದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು ಕೆಲ ಸೂಚನೆ ನೀಡುವ ಸಾಧ್ಯತೆ ಇದೆ.
*****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.