ಬೆಂಗಳೂರು: ಡ್ರಗ್ಸ್ ಜಾಲದಲ್ಲಿರುವ ಸ್ಯಾಂಡಲ್ವುಡ್ ನಟ-ನಟಿಯರ ಬಗ್ಗೆ ಮಾಹಿತಿ ನೀಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ಗೆ ನಾಳೆ ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಕಳೆದ ಸೋಮವಾರ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್ ಲಂಕೇಶ್, ಡ್ರಗ್ಸ್ ಜಾಲದಲ್ಲಿರುವ ಸ್ಯಾಂಡಲ್ವುಡ್ ನಟ-ನಟಿಯರು, ಸಂಗೀತ ನಿರ್ದೇಶಕರು, ರಾಜಕಾರಣಿಗಳು ಹಾಗೂ ರಾಜಕಾರಣಿಗಳ ಮಕ್ಕಳ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಇಂದ್ರಜಿಲ್ ಯಾವುದೇ ಪೂರಕ ದಾಖಲೆಗಳನ್ನು ನೀಡಿರಲಿಲ್ಲ. ಹೀಗಾಗಿ ನಾಳೆ ಬೆಳಿಗ್ಗೆ 11 ಗಂಟೆಗೆ ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಸೋಮವಾರ 6 ಪುಟಗಳ ಹೇಳಿಕೆ ದಾಖಲಿಸಿದ್ದ ಇಂದ್ರಜಿತ್ ಲಂಕೇಶ್ ಅವರಿಗೆ ಅಗತ್ಯವಿದ್ದರೆ ಮತ್ತೊಮ್ಮೆ ವಿಚಾರಣೆಗೆ ಕರೆಯುವುದಾಗಿ ಹೇಳಿ ಕಳಿಸಿದ್ದರು.
ನಾಳೆ ನಿಮ್ಮ ಬಳಿ ಇರುವ ಫೋಟೋ, ವಿಡಿಯೋ ಸೇರಿದಂತೆ ಅಗತ್ಯ ದಾಖಲೆಗಳಿದ್ದರೆ ಅವುಗಳನ್ನು ತೆಗೆದುಕೊಂಡು ಬನ್ನಿ ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.
ಡ್ರಗ್ಸ್ ನಂಟಿನ ಬಗ್ಗೆ ದಾಖಲೆ ಇಲ್ಲದೆ, ಸಾಕ್ಷಿಗಳಿಲ್ಲದೆ ಯಾರ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ. ಹೀಗಾಗಿ ದಾಖಲೆ ನೀಡುವಂತೆ ಮತ್ತೊಮ್ಮೆ ನೋಟಿಸ್ ನೀಡಲಾಗುವುದು ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನಿನ್ನೆ ತಿಳಿಸಿದ್ದರು.
******
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.