ಡ್ರಗ್ಸ್ ಕೇಸ್ ನಲ್ಲಿ ಇಂದ್ರಜಿತ್ ಮತ್ತೆ ಸ್ಫೋಟಕ ಹೇಳಿಕೆ
ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಣ್ಣ ಮೀನುಗಳ ಬಂಧನ ಮಾತ್ರ ಆಗಿದೆ ಅಷ್ಟೆ. ಇನ್ನೂ ದೊಡ್ಡ ತನಿಖೆ ನಡೆಯಬೇಕಾಗಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣ ವಿಚಾರವಾಗಿ ಸಿಸಿಬಿ ಅಧಿಕಾರಿಗಳು ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ಬುಲಾವ್ ನೀಡಿದ್ದರು. ಈ ಹಿನ್ನೆಲೆ ಅವರು ಕಮಿಷನರ್ ಕಚೇರಿಗೆ ಆಗಮಿಸಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿನಿಂದ ಡ್ರಗ್ ಮಾಫಿಯಾ ಸಂಬಂಧ ತನಿಖೆಗೆ ಸಹಕಾರ ನೀಡುತ್ತಾ ಬಂದಿದ್ದೇನೆ.
ನನ್ನ ಸಹಕಾರ ಹೀಗೆ ಮುಂದುವರಿಯುತ್ತೆ. ಸದ್ಯ ಪೊಲೀಸರು ಸಣ್ಣ ಸಣ್ಣ ಮೀನುಗಳನ್ನು ಹಿಡಿದಿದ್ದಾರೆ. ಇನ್ನೂ ದೊಡ್ಡ ತಿಮಿಂಗಿಲಗಳಿವೆ.
ಅವುಗಳನ್ನು ಹಿಡಿಯುವವರೆಗೂ ನಾನು ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.
ಇನ್ನು ಇದೊಂದು ಸಮಾಜಕ್ಕೆ ಮಾರಕ, ಇದರ ಅಂತ್ಯವಾಗಬೇಕು. ಇದರಿಂದ ಸಮಾಜಕ್ಕೆ ತೊಂದರೆಯಾಗಿದೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel