ಯಾವುದೇ ಸಾಕ್ಷಿಗಳನ್ನು ಅವ್ರು ನಮಗೆ ನೀಡಿಲ್ಲ : ಬಸವರಾಜ್ ಬೊಮ್ಮಾಯಿ indrajith-lankesh
ಬೆಂಗಳೂರು : ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ.
ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಡಿಸಿದ್ದಾರೆ.
ಇಂದ್ರಜಿತ್ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಮನವಿ ಪತ್ರದ ಮೇಲೆ ತನಿಖೆ ಮಾಡಲು ಸೂಚನೆ ನೀಡಿದ್ದೇನೆ.
ಮನವಿ ಪತ್ರದಲ್ಲಿ ಸ್ಪಷ್ಟವಾಗಿ ಏನೂ ಹೇಳಿಲ್ಲ. ಯಾವುದೇ ಸಾಕ್ಷಿಗಳನ್ನು ಅವರು ನಮಗೆ ನೀಡಿಲ್ಲ.
ಇಂದ್ರಜಿತ್ ಏನಾದರೂ ಆರೋಪ ಮಾಡೋದಾದ್ರೆ ದೂರು ಕೊಟ್ಟು ಆರೋಪಗಳನ್ನ ಮಾಡಲಿ. ನನಗೆ ಕೊಟ್ಟ ಮನವಿ ಮೇಲೆ ತನಿಖೆಗೆ ಸೂಚಿಸಿದ್ದೇನೆ ಎಂದರು.









