ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7060 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 229 ಜನರಿಗೆ ಸೋಂಕು ಇರುವುದು ದೃಢ ಪಟ್ಟಿದೆ.
ಬೆಂಗಳೂರು ನಗರದಲ್ಲಿಯೇ 42 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ. 60 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ತುಮಕೂರು ಜಿಲ್ಲೆಯಲ್ಲಿ ಇದೇ ಸಮಯದಲ್ಲಿ 18 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಪಾವಗಡ 4, ಗುಬ್ಬಿ 4, ತುಮಕೂರು ನಗರ 3, ಕುಣಿಗಲ್ 3, ಕೊರಟಗೆರೆ 3, ಶಿರಾ ತಾಲೂಕಿನಲ್ಲಿ ಒಬ್ಬರಿಗೆ ಸೋಂಕು ದೃಢವಾಗಿದೆ.








