ಮಂಗಳೂರು, ಮೇ 15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 16 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮೇ 12ರಂದು ದುಬೈನಿಂದ ಹಿಂತಿರುಗಿದ 15 ಮಂದಿ ಮತ್ತು ಸುರತ್ಕಲ್ ಮೂಲದ ಮಹಿಳೆಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುರತ್ಕಲ್ ಮೂಲದ 68 ವರ್ಷದ ಮಹಿಳೆಗೆ ಸೋಂಕು ಯಾವ ಮೂಲದಿಂದ ಹರಡಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ತೀವ್ರ ಉಸಿರಾಟದ ತೊಂದರೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಸುರತ್ಕಲ್ ಪ್ರದೇಶವನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿರುವುದಾಗಿ ಅವರು ಮಾಹಿತಿ ನೀಡಿದರು. ದುಬೈನಿಂದ ಬಂದಿರುವ ಪ್ರಯಾಣಿಕರ ಪೈಕಿ 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 45 ವರ್ಷದ ಗಂಡ, 33 ವರ್ಷದ ಹೆಂಡತಿ ಮತ್ತು 6 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂರು ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ವಿಮಾನದಲ್ಲಿ 38 ಮಂದಿ ಗರ್ಭಿಣಿಯರು ಪ್ರಯಾಣಿಸಿದ್ದು, ಇವರಲ್ಲಿ ಸೋಂಕು ಕಂಡುಬಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಮೇ 12 ರಂದು ಪ್ರಯಾಣ ಬೆಳೆಸಿದ ಎಲ್ಲಾ ಪ್ರಯಾಣಿಕರ ಸ್ವಾಬ್ ಟೆಸ್ಟ್ 12ನೇ ದಿನದಂದು ಮಾಡಲಿದ್ದೇವೆ ಎಂದು ಹೇಳಿದರು.
ಮೇ 18 ರಂದು ಇನ್ನೊಂದು ವಿಮಾನ ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದು, 171 ಮಂದಿ ಪ್ರಯಾಣಿಕರು ಮಂಗಳೂರಿಗೆ ಬರುವ ಪ್ರಾಥಮಿಕ ಮಾಹಿತಿ ದೊರಕಿದೆ. ಆದರೆ ಒಟ್ಟು ಎಷ್ಟು ಸಂಖ್ಯೆಯಲ್ಲಿ ಬರಲಿದ್ದಾರೆ ಎಂಬುವುದರ ಬಗ್ಗೆ ದ.ಕ ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








