ಬೆಂಗಳೂರು: ಕೊರೊನಾ ಹರಡಂತೆ ತಡೆಯಲು ಮಾಡಲಾದ ಲಾಕ್‍ಡೌನ್ ನಂತರ ಉದ್ಯೋಗ ಕಳೆದುಕೊಂಡು ಅತಂತ್ರರಾಗಿರುವ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ವಾರ್ತಾ ಇಲಾಖೆ ಆಯುಕ್ತ ಡಾ.ಪಿ ಹರ್ಷ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನಂತರ ಅದರ ಮುಂದುವರೆದ ಭಾಗವಾಗಿ ಇಂದು ವಾರ್ತಾ ಇಲಾಖೆ ಆಯುಕ್ತರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿ ಪತ್ರಕರ್ತರ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಯಿತು.
ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿದ ಆಯುಕ್ತರು, ನಾವು ಸಲ್ಲಿಸಿರುವ ಒತ್ತಾಯಗಳು ಈಡೇರಲು ತಡವಾಗಬಹುದು. ಹಾಗಾಗಿ ಸದ್ಯ ಕೋವಿಡ್ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಇದ್ದರೆ ತಕ್ಷಣ ನಿಯೋಜಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಸರ್ಕಾರಿ ಸಭೆ-ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗಳ ಸುದ್ದಿ ಮಾಡಲು ವಾರ್ತಾ ಇಲಾಖೆ ಮೂಲಕ ನಿಯೋಜಿಸಲು ಸಿದ್ದರಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಬಳಿಕ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರ ಬೇಡಿಕೆಗಳಿಗೆ ಆಯುಕ್ತರಾದ ಡಾ.ಹರ್ಷಾ ಅವರು ಸ್ಪಂದಿಸಿದ್ದಾರೆ. ಲಾಕ್‍ಡೌನ್ ನಂತರ ನೂರಾರು ಪತ್ರಕರ್ತರು ಉದ್ಯೋಗ ಕಳೆದುಕೊಂಡಿರುವ ವಿಚಾರವನ್ನು ಅವರ ಗಮನಕ್ಕೆ ತರಲಾಯಿತು. ಸದ್ಯಕ್ಕೆ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಸರ್ಕಾರ ನಿರತವಾಗಿದೆ. ಹೀಗಾಗಿ ಉಳಿದ ಬೇಡಿಕೆಗಳನ್ನು ಈಡೇರಿಸಲು ನಂತರ ಕ್ರಮಕೈಗೊಳ್ಳಲಾಗುವುದು. ಸದ್ಯಕ್ಕೆ ಕೋವಿಡ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಪರ್ತಕರ್ತರನ್ನು ಈ ಸೇವೆಗೆ ಬಳಸಿಕೊಳ್ಳುವ ಬಗ್ಗೆ ಸರ್ಕಾರದ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಶಿವಾನಂದ ತಗಡೂರು ತಿಳಿಸಿದರು.
ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...








