ಜಾಹೀರಾತು ಫಲಕಗಳ ಕುರಿತು ಮಾಹಿತಿ ನೀಡಿ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ಬೆಂಗಳೂರು, ಜುಲೈ 11: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸೋಂಕಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಜಾಹೀರಾತು ಫಲಕಗಳ ಕುರಿತು ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ರಾಜ್ಯ ಸರ್ಕಾರ ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸೋಂಕಿನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಫಲಕ ಲಗತ್ತಿಸಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಜಾಹೀರಾತು ಫಲಕಗಳಿಗೆ ಯಾವ ಬಗೆಯ ಪರಿಕರ ಬಳಸಲಾಗುತ್ತದೆ ಮತ್ತು ಯಾವ್ಯಾವ ಜಾಗದಲ್ಲಿ ಎಷ್ಟು ಅಳತೆಯ ಹೋರ್ಡಿಂಗ್ಸ್ ಅಳವಡಿಸಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ನೀಡಿ ಎಂದು ಸರ್ಕಾರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಇದೇ ತಿಂಗಳ 14ಕ್ಕೆ ಮುಂದೂಡಿದೆ.








