V Somanna | ವಸತಿ ಸಚಿವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ
ಬೆಂಗಳೂರು : ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇನ್ನು ನಾಲ್ಕು ತಿಂಗಳೊಳಗಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ಅವರು ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಸರ್ಕಾರವು ನೂರಾರುಕೋಟಿ ರೂ. ಗಳ ವೆಚ್ಚದಲ್ಲಿ ಆಸ್ಪತ್ರೆ ಹಾಗೂ ಕ್ರೀಡಾಂಗಣ ಕಾಮಗಾರಿಗಳನ್ನು ಕೈಗೊಂಡಿದೆ.

ಸರ್ಕಾರಿ ಸವಲತ್ತುಗಳು ಬಡವರಿಗೂ ದೊರೆಯಬೇಕೆಂಬುವುದು ಸರ್ಕಾರದ ಉದ್ದೇಶವಾಗಿದ್ದು, ಸಾರ್ವಜನಿಕರು ಆರೋಗ್ಯ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಹೊಂದುವುದು ಅವಶ್ಯವೆಂದರು.
ಪಂತರಪಾಳ್ಯ ಬಡಾವಣೆಯಲ್ಲಿ ಬಡವರ ಮನೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.