ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಆಡಿಯೋ ಇದೇ ಫೆಬ್ರವರಿ 14 ರ ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ.
ಪ್ರಜ್ವಲ್ ದೇವರಾಜ್ ಅಭಿನಯದ 30 ನೇ ಸಿನಿಮಾ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಆಡಿಯೋವನ್ನ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಅದರಂತೆ ಹುಬ್ಬಳ್ಳಿಯ ನೆಹರು ಗ್ರೌಂಡ್ನಲ್ಲಿ ಅದ್ಧೂರಿಯಾಗಿ ಸೆಟ್ ನಿರ್ಮಿಸಲಾಗುತ್ತಿದೆ.
ಇನ್ನ, ಇನ್ಸ್ ಪೆಕ್ಟರ್ ವಿಕ್ರಂ ಆಡಿಯೋ ಬಿಡುಗಡೆ ಸಮಾರಂಭಕ್ಕೆ ‘ಡಿಬಾಸ್’ ದರ್ಶನ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ವಿಕ್ರಂ ಸಿನಿಮಾದಲ್ಲಿ ದರ್ಶನ್ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಡಿದ್ದಾರೆ.
ಚಿತ್ರಕ್ಕೆ ನರಸಿಂಹ ಆಕ್ಷ್ಯನ್ ಕಟ್ ಹೇಳಿದ್ದಾರೆ. ಅನುಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಜಾಕಿ ಭಾವನಾ ಅಭಿನಯಿಸಿದ್ದಾರೆ. ಇನ್ನು, ವ್ಯಾಲೆಂಟೇನ್ಸ್ ಡೇ ನಲ್ಲಿ ವಿಕ್ರಂ ಚಿತ್ರದ ಆಡಿಯೋ ರಿಲೀಸ್ ಆಗುತ್ತಿರುವುದು ಅಭಿಮಾನಿಗಳ ಹರ್ಷವನ್ನ ಇಮ್ಮಡಿಗೊಳಿಸಿದೆ.