ಇನ್ ಸ್ಟಾದಲ್ಲಿ ಪ್ರೊಫೈಲ್ ಇರುವ ಮಹಿಳೆಯರು ಓದಲೇಬೇಕಾದ ಸುದ್ದಿ..!
ನವದೆಹಲಿ : ಮಹಿಳೆಯರ ಇನ್ ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿ, ಅವರ ಫೋಟೊಗಳನ್ನು ಮಾರ್ಫ್ ಮಾಡಿ ‘ಮಹಿಳೆಯರಿಗೆ ನಕಲಿ ಬೆತ್ತಲೆ ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ದೆಹಲಿಯ ನಿವಾಸಿ ಸುಮಿತ್ ಝಾ ಬಂಧಿತ ಆರೋಪಿಯಾಗಿದ್ದು, ಈತ ನಕಲಿ ಬೆತ್ತಲೆ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದನಂತೆ.
ಹಣ ನೀಡದಿದ್ದರೇ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಬಿಡೋದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಹೀಗೆ ಮಹಿಳೆಯೊಬ್ಬರಿಗೆ ಬೆದರಿಸಿದ್ದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಖ್ಖರ ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು
ಬಳಿಕ ಪೊಲೀಸರು ಇನ್ ಸ್ಟಾಗ್ರಾಮ್ ನಿಂದ ಟೆಕ್ನಿಕಲ್ ವಿವರಗಳು ಹಾಗೂ ಟೆಲಿಕಾಂ ಕಂಪನಿ ನೀಡಿದ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತ ಈ ವರೆಗೂ 100ಕ್ಕೂ ಹೆಚ್ಚು ಮಹಿಳೆಯರಿಗೆ ಬ್ಯ್ಲಾಕ್ ಮೇಲ್ ಮಾಡಿರುವುದಾಗಿ ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









