ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ : ಸಿದ್ದರಾಮಯ್ಯ Siddaramaiah
ಬೆಂಗಳೂರು : ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರವಾಗಿ ಟ್ವಿಟ್ಟರ್ ನಲ್ಲಿ ಕಿಡಿಕಾರಿರುವ ಸಿದ್ದರಾಮಯ್ಯ, ಕರ್ನಾಟಕದ ನೆಲ, ಜಲ, ಭಾಷೆ, ಕಾನೂನನ್ನು ಗೌರವಿಸದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ.
ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ @BJP4Karnataka ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ? 3/3#ಸಂಗೊಳ್ಳಿರಾಯಣ್ಣ
— Siddaramaiah (@siddaramaiah) December 20, 2021
ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ.
ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ ಬಿಜೆಪಿ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.








