ಆನೇಕಲ್: ಗುಪ್ತಚರ ಇಲಾಖೆ ಸಿಬ್ಬಂದಿ ದಂಪತಿಯನ್ನು ವಿಚಾರಣೆ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಸಿಲಿಕಾನ್ ಸಿಟಿ ಹೊರವಲಯದ ಆನೇಕಲ್ನಲ್ಲಿ (Anekal) ಗುಪ್ತಚರ (Intelligence) ವಿಭಾಗದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ರಾಯಚೂರು ಮೂಲದ ದಂಪತಿ ಕಳೆದ ಎರಡು ವರ್ಷಗಳಿಂದ ಮನೆಯಲ್ಲಿ ವಾಸಿಸುತ್ತಿದ್ದರು. 25ಕ್ಕೂ ಅಧಿಕ ಅಧಿಕಾರಿಗಳು ದಂಪತಿ ವಿಚಾರಣೆ ನಡೆಸಿದ್ದಾರೆ.
ಹಲವಾರು ಅನುಮಾನಗಳ ಹಿನ್ನೆಲೆಯಲ್ಲಿ ದಂಪತಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ, ಯಾವ ಕಾರಣಕ್ಕೆ ವಿಚಾರಣೆ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.