ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮತ್ತೆ ಮಳೆ ಆರ್ಭಟ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ.
ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಹರಿಯುವಿಕೆಯಲ್ಲಿ ಭಾರೀ ಏರಿಕೆಯಾಗಿದೆ. ತ್ರಿವೇಣಿ ಸಂಗಮ ಭರ್ತಿಯಾಗಲು ಇನ್ನೆರಡು ಅಡಿಗಳು ಮಾತ್ರವೇ ಬಾಕಿ ಇದೆ.
https://youtu.be/pDPQuy6Xvhk
ಒಂದು ಮಳೆ ಹೀಗೆ ಮುಂದುವರೆದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗುವ ಸಾಧ್ಯತೆ ಇದ್ದು, ಪ್ರವಾಹ ಎದುರಾಗುವ ಸಾಧ್ಯತೆ ಇದೆ. ಇನ್ನು ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರ, ಗಾಳಿಬೀಡು ಸೇರಿದಂತೆ ಬಹುತೇಕ ಕಡೆಗಳಲ್ಲಿ ನಿರಂತರ ಸುರಿಯುತ್ತಲೇ ಇದೆ. ಹೀಗಾಗಿ ಕೊಡಗಿನ ಜನರಲ್ಲಿ ಮತ್ತೆ ಪ್ರವಾಹ ಮತ್ತು ಭೂಕುಸಿತದ ಭೀತಿ ಎದುರಾಗಿದೆ.
https://youtu.be/OEsS0wOJz7M








