ಕೊರೋನಾ ವೈರಸ್ ಬಗ್ಗೆ ಮಡಿಕೇರಿಯಲ್ಲಿನ ಪ್ರವಾಸಿ ತಾಣ ಮತ್ತು ಹೆಚ್ಚಿನ ಜನದಟ್ಟಣೆ ಪ್ರದೇಶಗಳಲ್ಲಿ ತೀವ್ರ ನಿಗಾವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್ಗಳು, ಹೋಂ ಸ್ಟೇಗಳು, ಹೋಟೆಲ್ಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಪ್ರವಾಸಿ ತಾಣಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವಂತೆ, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳುವಂತೆಯೂ ಅಧಿಕಾರಿಗಳಿಗೆ ಅವರು ಹೇಳಿದರು.
ವಿದೇಶದಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ (94498 43263) ಅವರಿಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಹಾಗೆಯೇ ಯಾವುದೇ ಮಾಹಿತಿಗಾಗಿ 104 ಸಹಾಯವಾಣಿಗೆ ಕರೆ ಮಾಡಿ ಸಂಪರ್ಕಿಸುವಂತೆ ಹೇಳಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ
ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ತಿಳಿಸಿದರು.