ಹಿಜಾಬ್ ವಿವಾದಕ್ಕೆ ಮಧ್ಯಂತರ ತಡೆ – ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಏನಿದೆ ಗೊತ್ತಾ ?
ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಮುಂದಿನ ಆದೇಶದ ವರೆಗೆ ಧಾರ್ಮಿಕ ನಂಬಿಕೆಗೆ ಸೇರಿದ ಯಾವುದೇ ಕೆಸರಿ ಶಾಲು ಹಿಜಾಬ್ ಮತ್ತು ಧರ್ಮ ಧ್ವಜಗಳನ್ನ ಧರಿಸದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಎಂದು ಹೈಕೋರ್ಟ್ ಹೇಳಿದೆ. ಸತತ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು. ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ ಎಂದು ಹೈಕೋರ್ಟ್ ಹೇಳಿದೆ.
ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಪ್ರಕಟಿಸಿದೆ.