Bangalore : ಆಂತರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಜೆಡಿಎಸ್(JDS) ನ 2ನೇ ಪಟ್ಟಿ ಬಿಡುಗಡೆಯಾಗಿಲ್ಲ. ಇಂದು ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ, ಕುಮಾರಸ್ವಾಮಿ(Kumaraswamy) ಅವರು ಕೆಆರ್ ಪೇಟೆ ಯಿಂದ ಬೆಂಗಳೂರಿಗೆ ಬರುವುದು ತಡವಾದ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಲಿಲ್ಲ. ಹೀಗಾಗಿ ಏಪ್ರಿಲ್ 5 ರಂದು ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಲಿದೆ.
ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಏಪ್ರಿಲ್ 1 ರಂದು ನಡೆದ ಸಂಧಾನ ಸಭೆ ವಿಫಲವಾಗಿದೆ. ಭವಾನಿ ರೇವಣ್ಣ ಅವರಿಗೆ ಹಾಸನ(Hassan) ಟಿಕೆಟ್ ಕೈತಪ್ಪಿದೆ ಎನ್ನಲಾಗಿದೆ.
ಪದ್ಮನಾಭ ನಗರದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಗೌಡರು ತಮ್ಮ ನಿಲುವು ವ್ಯಕ್ತಪಡಿಸಿದ ಬಳಿಕ ಆಕ್ರೋಶಗೊಂಡ ಭವಾನಿ(Bhavani) ಮತ್ತು ಎಚ್.ಡಿ.ರೇವಣ್ಣ(HD Revanna) ಮುನಿಸಿಕೊಂಡು ಸಭೆಯನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಹೋಗಿದ್ದಾರೆ.
ಕುಟುಂಬದವರಿಗೆ ಟಿಕೆಟ್ ಬೇಡ ಎಂಬ ಬಲವಾದ ನಿಲುವು ವ್ಯಕ್ತಪಡಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಾತಿಗೇ ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್‌ನ ಎರಡನೇ ಪಟ್ಟಿ ಪ್ರಕಟಗೊಳ್ಳುವುದೇ? ಒಂದು ವೇಳೆ ಪ್ರಕಟಗೊಂಡರೂ ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಇರಲಿದೆಯೇ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.








