ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ
ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಡಿಜಿಸಿಎ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ. ಕೊರೊನಾ ಪ್ರಕರಣಗಳ ಏರಿಳಿತವನ್ನು ಆಧರಿಸಿ ಆಯ್ದ ಕೆಲವೊಂದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ. ಕೋವಿಡ್–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ, ವಂದೇ ಭಾರತ್ ಮಿಷನ್ ಯೋಜನೆಯಡಿ ಮೇ 2020ರಿಂದ ವಿಶೇಷ ವಿಮಾನಗಳು ಸಂಚರಿಸುತ್ತಿವೆ. ಇನ್ನೂ ಸೌದಿ ಅರೇಬಿಯಾವೂ ಸಹ ಭಾರತವನ್ನ ಕೆಫು ಪಟ್ಟಿಯಲ್ಲಿಟ್ಟಿದ್ದು, ಭಾರತ ಹಾಗೂ ಕೆಂಪು ಪಟ್ಟಿಯಲ್ಲಿನ ಇತರೇ ರಾಷ್ಟ್ರಗಳಿಗೆ ತೆರಳಿದವರನ್ನ 3 ವರ್ಷ ಜೈಲಿಗೆ ಹಾಕುವ ಜೊತೆಗೆ ಪಾಸ್ ಪೋರ್ಟ್ ರದ್ದುಗೊಳಿಸುವ ಧಮ್ಕಿ ಹಾಕಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.