ಕೋವಿಡ್ 3 ನೇ ಅಲೆ : ಅಂತರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ
ಭಾರತದಲ್ಲಿ ಕೋವಿಡ್ 3ನೇ ಅಲೆ ಸೃಷ್ಟಿಸಿರುವ ಆತಂಕದ ನಡುವೆ ದಿನೇ ದಿನೇ ಕೇಸ್ ಗಳು ರಾಕೆಟ್ ಸ್ಪೀಡ್ ನಲ್ಲಿ ದಾಖಲಾಗ್ತಿದೆ.. ಇದರ ನಡುವೆಯೇ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಟಫ್ ರೂಲ್ಸ್ ವಿಧಿಸುತ್ತಿರುವ ಸರ್ಕಾರವು ಈಗ ಅಂರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಿದೆ..
ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರು ಒಂದು ವಾರ ಕ್ವಾರಂಟೈನ್‌ನಲ್ಲಿ ಉಳಿಯುವುದು ಮತ್ತು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಕೊರೊನಾ ವೈರಸ್ ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ ಮಂಗಳವಾರದಿಂದಲೇ ಅನ್ವಯವಾಗುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಈ ನಿಯಮ ಜಾರಿಗೊಳಿಸಿದೆ.
ಒಮಿಕ್ರಾನ್ ಅಧಿಕ ಪ್ರಮಾಣದಲ್ಲಿ ಪತ್ತೆಯಾಗಿರುವ ಅಪಾಯಕಾರಿ ರಾಷ್ಟ್ರಗಳ ಪಟ್ಟಿಗೆ ಡಿಸೆಂಬರ್ ನಿಂದ ಈಚೆಗೆ 9 ರಾಷ್ಟ್ರಗಳು ಸೇರ್ಪಡೆಯಾಗಿದ್ದು, ಅಪಾಯಕಾರಿ ರಾಷ್ಟ್ರಗಳ ಪಟ್ಟಿಯಲ್ಲಿ ಇದೀಗ 19 ದೇಶಗಳು ಸೇರಿಕೊಂಡಿವೆ..
ಎಲ್ಲ ಪ್ರಯಾಣಿಕರು ಮನೆಗಳಲ್ಲಿಯೇ 7 ದಿನಗಳವರೆಗೆ ಪ್ರತ್ಯೇಕವಾಸದಲ್ಲಿ ಉಳಿಯಬೇಕು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಒಂದು ವೇಳೆ ವರದಿಯಲ್ಲಿ ಸೋಂಕು ಇರುವುದು ಖಚಿತವಾದರೆ, ಚಿಕಿತ್ಸೆ ನೀಡಲಾಗುವುದು ಮತ್ತು ಅವರ ಮಾದರಿಗಳನ್ನು ಜಿನೋಮ್ ಟೆಸ್ಟಿಂಗ್‌ಗೆ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ..








