ಸೌದಿಯಲ್ಲಿ ಎಲ್ಲಾ ಅಂತರಾಷ್ಟ್ರೀಯ ವಿಮಾನಗಳ ಸೇವೆ ಸ್ಥಗಿತ..!
ಬ್ರಿಟನ್ , ಇಟಲಿ ಹಾಗೂ ಕೆಲ ಯೂರೋಪ್ ದೇಶಗಳಲ್ಲಿ ನೂತನ ಸ್ವರೂಪದ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಅನೇಕ ದೇಶಗಳು ಬ್ರಿಟನ್ ಸೇರಿ ಇತರೇ ದೇಶಗಳಿಗೆ ವಿಮಾನ ಸೇವೆ ಸ್ಥಗಿತಗೊಳಿಸಿವೆ. ಇದೀಗ ಸೌದಿ ಅರೇಬಿಯಾ ಸಹ ಕೊರೊನಾ ಸೋಂಕಿನ ಹೊಸ ರೂಪಾಂತರವನ್ನು ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ.
ಮಾಸ್ತಿಫ್ ಬಲಿಷ್ಠ ಶ್ವಾನ ತಳಿಗಳು : ಈ ಶ್ವಾನಗಳ ಬಗ್ಗೆ ನಿಮಗೆಷ್ಟು ಗೊತ್ತು?
ಹೌದು ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ಅಷ್ಟೇ ಅಲ್ಲದೆ ವೈರಸ್ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯ ತಿಳಿಸಿದೆ. ಆದರೆ ಸರಕು ಸಾಗಣೆ ವಿಮಾನ ಸೇವೆಗಳು ಎಂದಿನಂತೆ ಇರಲಿವೆ. ಇನ್ನೂ ಕಳೆದ 3 ತಿಂಗಳಲ್ಲಿ ಐರೋಪ್ಯ ರಾಷ್ಟ್ರಗಳಿಂದ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಸರ್ಕಾರ ಆದೇಶಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








