ಮಾರ್ಚ್ 27 ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಪುನರಾಂಭ – Saaksha Tv
ನವದೆಹಲಿ: ಮಾರ್ಚ್ 27 ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಪುನರಂಭವಾಗಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಕೊರೊನಾ ಕಾರಣದಿಂದ 2020ರ ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್ ಬಬಲ್‌ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.
ಈಗ ದೇಶದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿದೆ.
ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಹೇಳಿದೆ.








