ಬೀದರ್: ರಾಜ್ಯದ ಗಡಿ ಮೂಲಕ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್ ತಾಲೂಕಿನ ನವಲಸಪೂರ್ ಗ್ರಾಮದ ಬಳಿ ಜನವಾಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಡ್ಡ ರಸ್ತೆಗಳ ಮೂಲಕ ತೆಲಂಗಾಣದ ಸಂಗಾರೆಡ್ಡಿಯಿಂದ ಬಿಳಿ ಸ್ವಿಫ್ಟ್ ಕಾರಿನಲ್ಲಿ 50 ಕೆ.ಜಿ ಗಾಂಜಾ ಸಾಗಣೆ ಮಾಡ್ತಿದ್ದರು.
ಔರಾದ್ ತಾಲೂಕಿನ ವಡಗಾಂವ್ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ತೆರಳುತ್ತಿದ್ದಾಗ ಆರೋಪಿ ದೇವಿದಾಸ್ ರಾಠೋಡ್‍ನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








