Invest in Puducherry :ಪುದುಚೇರಿ ಗೃಹಸಚಿವರಿಂದ ಕರ್ನಾಟಕದ ಉದ್ಯಮಿಗಳಿಗೆ ಭರ್ಜರಿ ಆಫರ್
ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಕರ್ನಾಟಕದ ಉದ್ಯಮಿಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ.
ಪುದುಚೇರಿಯು ಸಣ್ಣ ರಾಜ್ಯವಾಗಿದ್ದು, ಅಂತರರಾಷ್ಟ್ರೀಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಕರ್ನಾಟಕದ ಯುವ ಉದ್ಯಮಿಗಳು ಪುದುಚೇರಿಯಲ್ಲಿ ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್ ಮತ್ತಿತರ ಉದ್ಯಮವನ್ನು ಸ್ಥಾಪಿಸುವುದಾದರೆ ಸರ್ಕಾರ ಎಲ್ಲ ರೀತಿಯ ನೆರವು ಕಲ್ಪಿಸುವುದಾಗಿ ಸಚಿವರು ಹೇಳಿದ್ದಾರೆ.
ಪುದುಚೇರಿ ಗೃಹಸಚಿವರು ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುದುಚೇರಿ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಗಮನ ನೀಡಿದ್ದು, ಅವರ ನಾಯಕತ್ವದಲ್ಲಿ ದೇಶವು ಉತ್ತಮ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು.
invest-in-puducherry-a-great-offer-from-puducherry-home-minister-to-karnataka-businessmen