ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶವನ್ನು ಆಯೋಜಿಸಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರಥಮ ಬಾರಿಗೆ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಬಹುರಾಷ್ಟ್ರೀಯ ಕಂಪನಿಗಳು, ದೇಶದ ಉದ್ಯಮಪತಿಗಳು, ಸ್ಥಳೀಯ ಉದ್ಯಮಿಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿಶೇಷ ಪೇಪರ್ ಪ್ರಜೆಂಟೇಶನ್ ನಡೆಯಲಿದೆ.
ಹುಬ್ಬಳ್ಳಿ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪನೆಗೆ ಹೂಡಿಕೆದಾರರಲ್ಲಿ ಮನವಿ ಮಾಡಲಾಗಿದೆ.








