IOB Local Bank Officer Recruitment 2025 : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಲೋಕಲ್ ಬ್ಯಾಂಕ್ ಆಫೀಸರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ದಿನಾಂಕ 01/05/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಆನ್‌ಲೈನ್ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು.
ಅರ್ಜಿ ಶುಲ್ಕ :
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 12, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 31, 2025








