IOCL Apprentice Recruitment 2025 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರ್ಯಾಜುಯೇಟ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಭಾರತದೆಲ್ಲೆಡೆ
ಖಾಲಿಯಿರುವ ಹುದ್ದೆಗಳ ಸಂಖ್ಯೆ : 200
ಹುದ್ದೆಗಳ ವಿವರ:
ಟ್ರೇಡ್ ಅಪ್ರೆಂಟಿಸ್ 55
ಟೆಕ್ನಿಷಿಯನ್ ಅಪ್ರೆಂಟಿಸ್ 25
ಗ್ರ್ಯಾಜುಯೇಟ್ ಅಪ್ರೆಂಟಿಸ್ 120
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಜೊತೆಗೆ 2 ವರ್ಷಗಳ ಐಟಿಐ ಅರ್ಹತೆ ಹೊಂದಿರಬೇಕು.
• ಟೆಕ್ನಿಷಿಯನ್ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೊಮಾ (ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.
• ಗ್ರ್ಯಾಜುಯೇಟ್ ಅಪ್ರೆಂಟಿಸ್ – ಪದವಿ ಅರ್ಹತೆ ಹೊಂದಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 17, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 16, 2025
Website : https://www.apprenticeshipindia.gov.in/
https://nats.education.gov.in/








