ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡ ಕರ್ನಾಟಕದ ಪ್ರವೀಣ್ ದುಬೆ
ಕರ್ನಾಟಕದ ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ.
ಉತ್ತರ ಪ್ರದೇಶ ಮೂಲದ ಪ್ರವೀಣ್ ದುಬೆ ಅವರು ಕರ್ನಾಟಕ ತಂಡವನ್ನು ಪ್ರತಿ ನಿಧಿಸಿದ್ದರು. ಅಲ್ಲದೆ ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಬೆಳಕಿಗೆ ಬಂದಿರುವ ಪ್ರತಿಭೆ.
ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಗಾಯದಿಂದ ಟೂರ್ನಿಯಿಮದ ಹೊರನಡೆದಿದ್ದರು.
ಇದೀಗ ಅಮಿತ್ ಮಿಶ್ರಾ ಅವರ ಸ್ಥಾನಕ್ಕೆ ಪ್ರವೀಣ್ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಆಯ್ಕೆ ಮಾಡಿಕೊಂಡಿದೆ.
27ರ ಹರೆಯದ ಪ್ರವೀಣ್ ದುಬೆ ಅವರು 20 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ. ಇದ್ರಲ್ಲಿ 16 ವಿಕೆಟ್ ಗಳನ್ನು ಕಬಳಿಸಿದ್ದಾರೆ.
2016ರಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಪ್ರವೀಣ್ ದುಬೆ ಅವರನ್ನು 35 ಲಕ್ಷಕ್ಕೆ ಖರೀದಿ ಮಾಡಿತ್ತು.
2019ರಲ್ಲಿ ಪ್ರವೀಣ್ ದುಬೆ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.
ಕೆಪಿಎಲ್ ನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ಪರ ಅಡಿದ್ದರು.
ಚೊಚ್ಚಲ ರಣಜಿ ಪಂದ್ಯವನ್ನು ಆಡಿರುವ ದುಬೆ ಅವರು ಎರಡು ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಉತ್ತಮ ಬ್ಯಾಟಿಂಗ್ ಮೂಲಕವೂ ಗಮನ ಸೆಳೆದಿದ್ದಾರೆ.
ಸದ್ಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಲ್ಲಿದೆ.