ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಬಡತನದಲ್ಲಿ ಅರಳಿದ ಯಾರ್ಕರ್ ಕಿಂಗ್ ತಂಗರಸು ನಟರಾಜನ್

admin by admin
October 7, 2020
in IPL 2020, Newsbeat, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಬಡತನದಲ್ಲಿ ಅರಳಿದ ಯಾರ್ಕರ್ ಕಿಂಗ್ ತಂಗರಸು ನಟರಾಜನ್

#ipl 2020 #natarajan #tangarasu natarajan #srhತಂಗರಸು ನಟರಾಜನ್.. 29ರ ಹರೆಯದ ತಮಿಳುನಾಡು ರಣಜಿ ತಂಡದ ವೇಗಿ. ಸದ್ಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ಯಾರ್ಕರ್ ಕಿಂಗ್. ಡೆತ್ ಓವರ್ ಗಳಲ್ಲಿ ತನ್ನ ಅಮೋಘ ಯಾರ್ಕರ್ ಎಸೆತಗಳ ಮೂಲಕವೇ ಬ್ಯಾಟ್ಸ್ ಮೆನ್ ಗಳನ್ನು ದಂಗುಬಡಿಸುವ ನಟರಾಜನ್ ನಡೆದ ಬಂದಿರೋದು ಕಲ್ಲು ಮುಳ್ಳಿನ ಹಾದಿಯಲ್ಲಿ.
ಹೌದು, ಬಡತನ ಏನು ಅನ್ನೋದು ನಟರಾಜನ್ ಗೆ ಚೆನ್ನಾಗಿ ಗೊತ್ತಿದೆ. ಹಾಗಂತ ಬಡತನದ ದಿನಗಳನ್ನು ನಟರಾಜನ್ ಮರೆತಿಲ್ಲ. ಒಂದು ಹೊತ್ತಿನ ಊಟಕ್ಕೂ ಅಪ್ಪ ಅಮ್ಮ ಕಷ್ಟಪಡುತ್ತಿದ್ದ ದಿನಗಳು ಕೂಡ ನಟರಾಜನ್ ಅವರಿಗೆ ನೆನಪಿದೆ.ಬಡತನದ ನೋವಿನಲ್ಲೇ ಕ್ರಿಕೆಟ್ ಆಟಗಾರನಾಗಿ ರೂಪುಗೊಂಡಿರುವ ನಟರಾಜನ್ ಅವರ ಯಶಸ್ಸಿನ ಹಿಂದೆ ಸಾಕಷ್ಟು ಪರಿಶ್ರಮ, ನೋವು, ಬದ್ಧತೆ ಅದಕ್ಕಿಂತ ಹೆಚ್ಚಾಗಿ ಕ್ರಿಕೆಟ್ ಮೇಲಿನ ಪ್ರೀತಿ ಆಗಾಧವಾಗಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಅಂದ ಹಾಗೇ, ನಟರಾಜನ್ ಅವರ ಅಪ್ಪ ಕೂಲಿ ಕಾರ್ಮಿಕರಗಿದ್ದರು. ಅಮ್ಮ ರಸ್ತೆ ಬದಿಯಲ್ಲಿ ಕೋಳಿ ಮಾರಾಟ ಮಾಡುತ್ತಿದ್ದರು. ಅಪ್ಪ ಅಮ್ಮನ ದಿನ ನಿತ್ಯದ ದುಡಿಮೆಯ ಹಣದಲ್ಲೇ ಜೀವನ ಸಾಗಿಸಬೇಕಾಗಿದ್ದ ಈ ಕುಟುಂಬಕ್ಕೆ ಬೆಳಕಾಗಿದ್ದು ನಟರಾಜನ್.
ಇದೀಗ ಅಪ್ಪ ಕೂಲಿ ಕೆಲಸ ಮಾಡುತ್ತಿಲ್ಲ. ಆದ್ರೆ ಅಮ್ಮ ರಸ್ತೆ ಬದಿಯಲ್ಲೇ ಕೋಳಿ ಮಾರಾಟ ಮಾಡುತ್ತಿದ್ದಾರೆ. ಅಮ್ಮನ ವೃತ್ತಿಯನ್ನು ಬದಲಾಯಿಸಲು ನಟರಾಜನ್‍ಗೆ ಸಾಧ್ಯವಾಗಿಲ್ಲ. ಇನ್ನುಳಿದಂತೆ ತನಗಾಗಿ ಕಷ್ಟಪಟ್ಟು ದುಡಿದ ಅಪ್ಪ ಅಮ್ಮನಿಗೆ ಒಳ್ಳೆಯ ಮನೆ ಕಟ್ಟಿಸಿಕೊಟ್ಟಿದ್ದಾರೆ. ತನ್ನ ತಂಗಿ ಸೇರಿದಂತೆ ಒಡ ಹುಟ್ಟಿದವರಿಗೆ ಉತ್ತಮ ಶಿಕ್ಷಣ ನೀಡಲು ನೆರವಾಗುತ್ತಿದ್ದಾರೆ. ಅದೇ ರೀತಿ ತಾನು ಹುಟ್ಟಿ ಬೆಳೆದ ಊರಿನಲ್ಲಿ ಕ್ರಿಕೆಟ್ ತರಬೇತಿಗೆ ಬೇಕಾಗಿರುವಂತಹ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಇದೆಲ್ಲಾ ಆಗಿದ್ದು ಕ್ರಿಕೆಟ್ ಮತ್ತು ಐಪಿಎಲ್ ನಿಂದಾಗಿ.
#natarajan #ipl 2020ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ 14 ಮತ್ತು 18ನೇ ಓವರ್ ನಲ್ಲಿ ನಟರಾಜನ್ ಅವರು ತಮ್ಮ ಯಾರ್ಕರ್ ಎಸೆತಗಳ ಮೂಲಕವೇ ಗಮನ ಸೆಳೆದಿದ್ದರು. 4 ಓವರ್ ಗಳಲ್ಲಿ 21 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಅಲ್ಲದೆ ಮಾರ್ಕಸ್ ಸ್ಟೋನಿಸ್ ಅವರ ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ಸುಲಭ ಜಯ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ತಮಿಳುನಾಡಿನ ಸೇಲಂ ಜಿಲ್ಲೆಯ ಚಿನ್ನಪ್ಪಂಪಟ್ಟಿ ಗ್ರಾಮದ ನಟರಾಜನ್ ಅವರನ್ನು 2017ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮೂರು ಕೋಟಿ ಮೊತ್ತಕ್ಕೆ ಖರೀದಿ ಮಾಡಿತ್ತು. ಎಡಗೈ ವೇಗಿಯಾಗಿರುವ ನಟ್ಟೂ, 2018ರಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡವನ್ನು ಸೇರಿಕೊಂಡ್ರು. ಆದ್ರೆ ಒಂದು ಪಂದ್ಯವನ್ನು ಮಾತ್ರ ಆಡಿದ್ದರು. ಇದೀಗ ಸನ್ ರೈಸರ್ಸ್ ತಂಡದ ಪ್ರಮುಖ ಬೌಲರ್ ಆಗಿದ್ದಾರೆ.
ವೀರೇಂದ್ರ ಸೆಹ್ವಾಗ್, ಮುತ್ತಯ್ಯ ಮುರಳೀಧರನ್ ಹಾಗೂ ಬ್ರೆಟ್ ಲೀ ಕೂಡ ನಟರಾಜನ್ ಅವರ ಯಾರ್ಕರ್ ಎಸೆತಗಳಿಗೆ ಅಚ್ಚರಿಗೊಂಡಿದ್ದಾರೆ. ಸೆಹ್ವಾಗ್ ಕಿಂಗ್ಸ್ ತಂಡದ ಮೆಂಟರ್ ಆಗಿದ್ದಾಗ ನಟರಾಜನ್‍ಗೆ ಅವಕಾಶ ನೀಡಿದ್ರು. ನಂತರ ಸನ್ ರೈಸರ್ಸ್ ಹೈದ್ರಬಾದ್ ತಂಡವನ್ನು ಸೇರಲು ಪ್ರಮುಖ ಕಾರಣರಾದವರು ಮುತ್ತಯ್ಯ ಮುರಳೀಧರನ್.
ಯುವ ಕ್ರಿಕೆಟಿಗರಿಗೆ ಸಹಾಯ ಮಾಡುತ್ತಿರುವ ನಟರಾಜನ್ ತನ್ನ ಕಷ್ಟದ ದಿನಗಳನ್ನು ಮರೆತಿಲ್ಲ. ತನ್ನೂರಿನಲ್ಲೇ ಅಕಾಡೆಮಿ ನಡೆಸುವ ಮೂಲಕ ಯುವ ಕ್ರಿಕೆಟಿಗರಿಗೆ ಮಾರ್ಗದರ್ಶನಕರಾಗಿದ್ದಾರೆ.

Tags: #natarajan#sewagh#t.natarajan#tamilnadu cricket#tangarasu natarajanIPL 2020srhSunRisers Hyderabad
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram