ಐಪಿಎಲ್ ಫ್ರಾಂಚೈಸಿಗಳನ್ನು ಸೇರಿಕೊಂಡಿರುವ ಟೀಮ್ ಇಂಡಿಯಾ ಆಟಗಾರರು..!
IPL 2021: Franchises begin preparation for IPL 14 edition
ಟೀಮ್ ಇಂಡಿಯಾ ಆಟಗಾರರು ಈಗ ಐಪಿಎಲ್ ನತ್ತ ಚಿತ್ತವನ್ನಿಟ್ಟಿದ್ದಾರೆ. ಏಪ್ರಿಲ್ 9ರಿಂದ ಆರಂಭವಾಗಲಿರುವ 14ನೇ ಆವೃತ್ತಿಯ ಟೂರ್ನಿಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ತಕ್ಷಣವೇ ತಮ್ಮ ತಮ್ಮ ಫ್ರಾಂಚೈಸಿಗಳನ್ನು ಸೇರಿಕೊಂಡಿರುವ ಆಟಗಾರರು ಕ್ವಾರಂಟೈನ್ ನಲ್ಲಿದ್ದುಕೊಂಡು ಲಘುವಾಗಿ ಅಭ್ಯಾಸ ನಡೆಸುತ್ತಿದ್ದಾರೆ.
ಎಂಟು ಫ್ರಾಂಚೈಸಿಗಳು ತಮ್ಮ ತರಬೇತಿ ಶಿಬಿರವನ್ನು ಆರಂಭಿಸಿದ್ದು ಕಠಿಣ ತಾಲೀಮು ನಡೆಸುತ್ತಿದೆ.
ಏಪ್ರಿಲ್ 9ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಚೆನ್ನೈನಲ್ಲಿ ಹೋರಾಟ ನಡೆಸಲಿವೆ.
ಈ ನಡುವೆ ಭಾರತದಲ್ಲಿ ಕೋವಿಡ್ ಸೋಂಕು ಕೂಡ ದಿನೇ ದಿನ ಹೆಚ್ಚಾಗುತ್ತಿದೆ, ಹೀಗಾಗಿ ಟೂರ್ನಿಯನ್ನು ಬಹಳ ಎಚ್ಚರಿಕೆಯಿಂದ ಆಯೋಜಿಸಲು ಬಿಸಿಸಿಐ ಕೂಡ ಪ್ಲಾನ್ ಮಾಡಿಕೊಳ್ಳುತ್ತಿದೆ.
ಮುಂಬೈ, ಬೆಂಗಳೂರು, ಚೆನ್ನೈ, ಕೊಲ್ಕತ್ತಾ, ಡೆಲ್ಲಿ. ಅಹಮದಾಬಾದ್ ನಲ್ಲಿ ಪಂದ್ಯಗಳು ನಡೆಯಲಿವೆ.
ಅಂದ ಹಾಗೇ ಸದ್ಯದ ಪರಿಸ್ಥಿತಿಯನ್ನು ನೋಡಿದ್ರೆ, ಈ ಬಾರಿಯ ಐಪಿಎಲ್ ನಲ್ಲೂ ಪ್ರೇಕ್ಷಕರಿಗೆ ಪಂದ್ಯ ನೋಡಲು ಅವಕಾಶವಿಲ್ಲ. ಪ್ರೇಕ್ಷಕರ ಭರಾಟೆ ಇಲ್ಲದೆ ಪಂದ್ಯಗಳನ್ನು ಆಟಗಾರರು ಆಡಬೇಕಿದೆ.
ಇನ್ನು ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ, ಇತ್ತೀಚೆಗೆ ನಡೆದ ರೋಡ್ ಸೇಫ್ಟಿ ವಲ್ರ್ಡ್ ಸಿರೀಸ್ ಟೂರ್ನಿಯಲ್ಲಿ ಆಡಿರುವಂತಹ ಭಾರತದ ನಾಲ್ವರು ಆಟಗಾರರಿಗೆ ಕೋವಿಡ್ ದೃಢಪಟ್ಟಿದೆ. ಸಚಿನ್, ಬದ್ರಿನಾಥ್, ಯುಸೂಫ್ ಮತ್ತು ಇರ್ಫಾನ್ ಪಠಾಣ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕ್ವಾರಂಟೈನ್ ನಲ್ಲಿದ್ದಾರೆ.
ಇದ್ರಿಂದ ಆತಂಕಗೊಂಡಿರುವ ಬಿಸಿಸಿಐ ಐಪಿಎಲ್ ಟೂರ್ನಿಯಲ್ಲಿ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಆಯೋಜನೆ ಮಾಡಲು ಮುಂದಾಗಿದೆ.