ಐಪಿಎಲ್ 2021 | ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ IPL 2021 saaksha tv
ಅಬುಧಾಬಿ : ಐಪಿಎಲ್ ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ.
ಸದ್ಯ ಟಾಸ್ ಗೆದ್ದ ಕೊಲ್ಕತ್ತಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲ್ಕತ್ತಾ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಡಿಜೆ ಬ್ರಾವೋ ಬದಲಿಗೆ ಸ್ಯಾಮ್ ಕರನ್ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಐಪಿಎಲ್ ಟೂರ್ನಿಯ ಎರಡನೇ ಹಂತದಲ್ಲಿ ಚೆನ್ನೈ ಮತ್ತು ಕೋಲ್ಕತ್ತ ತಂಡಗಳು ಗೆಲುವಿನ ಹಾದಿಯಲ್ಲಿ ಹೆಜ್ಜೆ ಇರಿಸಿದ್ದು ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿವೆ.
ಎರಡೂ ತಂಡಗಳು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿವೆ. ಹೀಗಾಗಿ ಈ ತಂಡಗಳ ನಡುವಿನ ಮುಖಾಮುಖಿ ಹೆಚ್ಚು ಕುತೂಹಲ ಕೆರಳಿಸಿದೆ.









