ಐಪಿಎಲ್ 2021- ಮುಂಬೈ ಇಂಡಿಯನ್ಸ್ ಆಟಗಾರರಿಗೆ ನೋ ಕೋವಿಡ್ -19 ಟೆನ್ಷನ್..!
ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪಿಂಗ್ ಸಲಹೆಗಾರ ಕಿರಣ್ ಮೊರೆ ಅವರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಮುಂಬೈ ಇಂಡಿಯನ್ಸ್ ಆಟಗಾರರು ಮತ್ತು ಕಿರಣ್ ಮೊರೆ ಒಂದೇ ಹೊಟೇಲ್ ನಲ್ಲಿದ್ದಾರೆ. ಹೀಗಾಗಿ ಕಿರಣ್ ಮೊರೆ ಅವರಿಗೆ ಕೋವಿಡ್-19 ಸೋಂಕು ದೃಢವಾಗುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಕೋವಿಡ್ ಟೆಸ್ಟ್ ಮಾಡಲಾಯ್ತು.
ಟೆಸ್ಟ್ ನಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರು ಮತ್ತು ಸಿಬ್ಬಂದಿಗಳ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಮುಂಬೈ ಆಟಗಾರರಿಗೆ ಯಾವುದೇ ರೀತಿಯ ಕೋವಿಡ್ 19 ಅಂತಕವಿಲ್ಲ.
ಈ ನಡುವೆ, ಮಂಗಳವಾರ ಮುಂಬೈ ಇಂಡಿಯನ್ಸ್ ತಂಡದ ತರಬೇತಿ ಶಿಬಿರವನ್ನು ರದ್ದುಗೊಳಿಸಲಾಯ್ತು. ಇದೀಗ ಎಲ್ಲಾ ಆಟಗಾರರ ವರದಿ ನೆಗೆಟಿವ್ ಬಂದಿರುವುದರಿಂದ ತರಬೇತಿ ಶಿಬಿರ ಮತ್ತೆ ಆರಂಭವಾಗಿದೆ.
ಸದ್ಯ ಮುಂಬೈ ಇಂಡಿಯನ್ಸ್ ಆಟಗಾರರು ಚೆನ್ನೈನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಏಪ್ರಿಲ್ 9ರಂದು ಆರಂಭವಾಗಲಿರುವ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಬಿಸಿಸಿಐ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರದ ಮಾರ್ಗಸೂಚಿ ಮತ್ತು ಬಿಸಿಸಿಐನ ಎಸ್ ಒಪಿ ಮಾರ್ಗಸೂಚಿಗಳನ್ನು ಎಲ್ಲಾ ಫ್ರಾಂಚೈಸಿಗಳು ಪಾಲಿಸಲೇಬೇಕು.